
Bangalore: ನಿಗೂಢ ಸ್ಫೋಟ ಸಂಭವಿಸಿ ಓರ್ವ ಬಾಲಕ ಸಾವು; ಹಲವರಿಗೆ ಗಾಯ
15/08/2025
ಬೆಂಗಳೂರಿನ ವಿಲ್ಸನ್ ಗಾರ್ಡನ್‌ನ ಚಿನ್ನಯ್ಯನ ಪಾಳ್ಯದಲ್ಲಿ ನಿಗೂಢ ಸ್ಫೋಟ ಸಂಭವಿಸಿ ಓರ್ವ ಬಾಲಕ ಸಾವನ್ನಪ್ಪಿದ್ದು, ಮೂರು ಮನೆಗಳು ಧ್ವಂಸಗೊ0ಡಿದೆ. ಗಂಭೀರ ಗಾಯಗೊಂಡಿದ್ದ ಮುಬಾರಕ್ (8) ಮೃತ ಬಾಲಕ.
ಕಸ್ತೂರಿ (28), ಸರಸಮ್ಮ (50), ಸಬ್ರಿನ್ ಬಾನು (35), ಫಾತಿಮಾ (8) ಸೇರಿ 12 ಜನ ಗಾಯಗಳಾಗಿ ಸಂಜಯ್ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಸ್ಫೋಟದ ತೀವ್ರತೆಗೆ ಮೊದಲನೇ ಮಹಡಿಯ ಮನೆ ಗೋಡೆ ಛಾವಣಿ ಕುಸಿದು ಬಿದ್ದಿದೆ. 8ಕ್ಕೂ ಹೆಚ್ಚು ಮನೆಗಳಿಗೆ ಹಾನಿ ಉಂಟಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿರುವ ಆಡುಗೋಡಿ ಠಾಣೆ ಪೊಲೀಸರು ಮೇಲ್ನೋಟಕ್ಕೆ ಅಡುಗೆ ಅನಿಲ ಸಿಲಿಂಡರ್ ಸ್ಟೋಟ ಸಂಭವಿಸಿರಬಹುದೆಂದು ಅಂದಾಜಿಸಲಾಗಿದೆ.