Bangalore: 2014ರ ಲೋಕಸಭೆ ಚುನಾವಣೆಯಲ್ಲಿ ಮತಗಳ್ಳತನ ಆರೋಪ; ಕಾಂಗ್ರೆಸ್ ಧರಣಿ
08/08/2025
2014ರ ಲೋಕಸಭೆ ಚುನಾವಣೆಯಲ್ಲಿ ಮತಗಳ್ಳತನವಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸುತ್ತಿದೆ.
ಮತಗಳ್ಳತನದ ಆರೋಪ ಹೊರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಬೆಂಗಳೂರಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನ ಫ್ರೀಡಂ ಪಾಕ್‌ನಲ್ಲಿ ನಡೆದ ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಬಿಜೆಪಿ ನಾಯಕರು ಸಂವಿಧಾನದ ಮೇಲೆ ದಾಳಿ ಮಾಡಿದ್ದಾರೆ ಎಂದು ಆರೋಪಿಸಿದರು.
"ನಮ್ಮ ಮತ, ನಮ್ಮ ಹಕ್ಕು, ನಮ್ಮ ಹೋರಾಟ" ಪ್ರತಿಭಟನಾ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್, ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರು, ಶಾಸಕರು, ಸಂಸದರು ಸೇರಿ ಸಾವಿರಾರು ಕಾರ್ಯಕರ್ತರು ಪಾಲ್ಗೊಂಡಿದ್ದಾರೆ.
ಸುಮಾರು 10 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಫ್ರೀಡಂ ಪಾರ್ಕ್ ಸುತ್ತಮುತ್ತಲೂ ಭದ್ರತೆಗಾಗಿ 6 ಸಾವಿರ ಪೊಲೀಸರನ್ನು ನಿಯೋಜಿಸಲಾಗಿದ್ದು, ಸ್ಥಳದಲ್ಲಿ ತಾತ್ಕಾಲಿಕ ಕಂಟ್ರೋಲ್ ರೂಮ್ ತೆರೆಯಲಾಗಿದೆ. ಜೊತೆಗೆ ಪೊಲೀಸ್ ಸಿಬ್ಬಂದಿಯನ್ನು ತಲಾ ಓರ್ವ ಡಿಸಿಪಿ ನೇತೃತ್ವದಲ್ಲಿ 15 ಸೆಕ್ಟರ್‌ಗಳನ್ನಾಗಿ ವಿಂಗಡಿಸಲಾಗಿದೆ. ಪ್ರತಿಭಟನಾನಿರತರ ನಡುವೆಯೂ ಸಹ 500ಕ್ಕೂ ಅಧಿಕ ಪೊಲೀಸರು ಭದ್ರತೆಗಾಗಿ ನಿಯೋಜನೆಯಾಗಿದ್ದಾರೆ.