
Bangalore: ಅಸಮಾನತೆ ಅಳಿಸುವ ಗ್ಯಾರಂಟಿಗಳ ಯಶಸ್ಸಿಗೆ ಸಿದ್ಧರಾಮಯ್ಯ ಸಂತಸ
15/08/2025
ದೇಶದ ಸಂಪತ್ತಿನ ಅಸಮಾನ ಹಂಚಿಕೆಗೆ ಬೇಸರ ವ್ಯಕ್ತಪಡಿಸಿದ ಸಿಎಂ ಸಿದ್ಧಾರಾಮಯ್ಯ ಅವರು ಅಸಮಾನತೆ ಅಳಿಸುವ ಗ್ಯಾರಂಟಿಗಳ ಯಶಸ್ಸಿಗೆ ಸಂತಸ ವ್ಯಕ್ತಪಡಿಸಿದ್ದಾರೆ.
ಅವರು ಬೆಂಗಳೂರಿನಲ್ಲಿ ಸ್ವಾತಂತ್ರ್ಯೋತ್ಣವ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ನುಡಿದಂತೆ ನಡೆಯಬೇಕು ಎಂಬುದು 12ನೇ ಶತಮಾನದ ಬಸವಾದಿ ಶರಣರ ನಿಶ್ಚಲ ನಿಲುವು. ನಮ್ಮ ಸರ್ಕಾರ ಈ ಧ್ಯೇಯ ವಾಕ್ಯದಲ್ಲಿ ನಂಬಿಕೆಯಿಟ್ಟು ರಾಜ್ಯವು ತನ್ನದೇ ಆದ ಅಭಿವೃದ್ಧಿ ಮಾದರಿಗಳನ್ನು ನಿರ್ಮಿಸಿದೆ. ಇದಕ್ಕೆ ‘ಕರ್ನಾಟಕ ಅಭಿವೃದ್ಧಿ ಮಾದರಿ’ ಎಂಬ ಹೆಸರಿನಲ್ಲಿ ಮನ್ನಣೆ ದೊರೆತಿರುವುದು ಹೆಮ್ಮೆಯ ಸಂಗತಿ. ವಿಶ್ವಸಂಸ್ಥೆಯ ಮುಖ್ಯಸ್ಥರಾದ ಫಿಲೆಮಾನ್ ಯಾಂಗ್ರವರು ಕರ್ನಾಟಕಕ್ಕೆ ಬಂದು ನಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆ ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ. ಈ ಮೂಲಕ ನಮ್ಮ ಯೋಜನೆಗಳು ವಿಶ್ವಮಾನ್ಯಗೊಂಡಿವೆ ಎಂದರು. ದೇಶ ನಿರ್ಮಾಣದಲ್ಲಿ ಉತ್ಪಾದಕ ವರ್ಗ ಹಾಗೂ ದೇಶ ರಕ್ಷಣೆಯಲ್ಲಿ ಸೈನಿಕ ವರ್ಗದ ಕೊಡುಗೆಯನ್ನು, ಹಾಗೂ ರಾಜ್ಯದ ಆರ್ಥಿಕ ಪ್ರಗತಿಯಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆಗೂ ಮುಖ್ಯಮಂತ್ರಿ ಮೆಚ್ಚುಗೆ ವ್ಯಕ್ತಪಡಿಸಿದರು.