Bangalore: ಪರಿಶಿಷ್ಟ ಜಾತಿಗಳಿಗೆ ಮೀಸಲಾತಿ ವಿಚಾರ; ನ್ಯಾ. ನಾಗಮೋಹನ್ ದಾಸ್ ಆಯೋಗದಿಂದ ವರದಿ ಸಲ್ಲಿಕೆ
04/08/2025
ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸುವ ಕುರಿತು ಶಿಫಾರಸು ಮಾಡಲು ರಾಜ್ಯ ಸರ್ಕಾರ ನೇಮಿಸಿದ್ದ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ನೇತೃತ್ವದ ಏಕಸದಸ್ಯ ಆಯೋಗವು ಶಿಫಾರಸುಗಳನ್ನು ಒಳಗೊಂಡ ವರದಿಯನ್ನು ಸಲ್ಲಿಸಿದೆ.
ವಿಧಾನಸೌಧದ ಕಾರ್ಯಾಲಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಮೀಕ್ಷಾ ವರದಿಯ್ನನು ಸಲ್ಲಿಸಲಾಯಿತು. ಒಳ ಮೀಸಲಾತಿ ಕಲ್ಪಿಸುವ ಉದ್ದೇಶದಿಂದ ಪರಿಶೀಷ್ಟ ಕುಟುಂಬಗಳ ದತ್ತಾಂಶ ಸಂಗ್ರಹಿಸಲು ರಾಜ್ಯಾದ್ಯಂತ ಮೇ 5ರಿಂದ ವಿವಿಧ ಹಂತಗಳಲ್ಲಿ ಪರಿಶಿಷ್ಟ ಜಾತಿ, ಉಪ ಜಾತಿ ಸಮಗ್ರ ಸಮೀಕ್ಷೆ ನಡೆಸಿತ್ತು. ಸಂಗ್ರಹಿಸಲಾದ ದತ್ತಾಂಶಗಳನ್ನು ಇ- ಆಡಳಿತ ಇಲಾಖೆಯ ಸಹಯೋಗದಲ್ಲಿ ವಿಶ್ಲೇಷಿಸಲಾಗಿದೆ.
ಈ ಸಂದರ್ಭದಲ್ಲಿ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ, ಕೆ.ಹೆಚ್. ಮುನಿಯಪ್ಪ, ಶಿವರಾಜ್ ತಂಗಡಗಿ, ಆರ್.ಬಿ. ತಿಮ್ಮಾಪುರ, ಪ್ರಿಯಾಂಕ್ ಖರ್ಗೆ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ ಹಿರಿಯ ಅಧಿಕಾರಿಗಳು ಇದ್ದರು.