
Bangalore: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ಮತಗಳ್ಳತನ ಆರೋಪಕ್ಕೆ ಹೆಚ್‌ಡಿಕೆ ವಾಗ್ದಾಳಿ
08/08/2025
2014ರ ಲೋಕಸಭೆ ಚುನಾವಣೆಯಲ್ಲಿ ಮತಗಳ್ಳತನವಾಗಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ ಕುಮಾರ ಸ್ವಾಮಿ ಕಿಡಿಕಾರಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಹೆಚ್.ಡಿ ಕುಮಾರಸ್ವಾಮಿ, ಸಾಂವಿಧಾನಿಕ ಸಂಸ್ಥೆಗಳ ಮೇಲೆ ಅಸತ್ಯದ ಆರೋಪದ ಮೂಲಕ ಅನುಮಾನದ ಪ್ರಯೋಜನ ಪಡೆಯುವ ಕಿಡಿಗೇಡಿ ಪಿತೂರಿ ಎಂದು ಕಿಡಿಕಾರಿದ್ದಾರೆ. ಚುನಾವಣೆಯಲ್ಲಿ ಎಸಗಿದ ಪಾಪವನ್ನು ಮುಳ್ಳಿನಿಂದ ಮುಚ್ಚಿಕೊಳ್ಳುವ ಗೂಬೆಲ್ ರಾಜಕಾರಣ ಎಂದು ವಾಗ್ದಾಳಿ ನಡೆಸಿದ್ದಾರೆ.