
Bangalore: ರಾಜ್ಯದಲ್ಲಿ ಇಂದಿನಿಂದ ಮಳೆ ಬಿರುಸು; ಯೆಲ್ಲೋ ಅಲರ್ಟ್ ಘೋಷಣೆ
06/08/2025
ಕಳೆದ ಕೆಲವು ದಿನಗಳಿಂದ ಸ್ವಲ್ಪ ಬಿಡುವು ಪಡೆದುಕೊಂಡಿದ್ದ ಮಳೆ ಇಂದಿನಿಂದ ಬಿರುಸು ಪಡೆದುಕೊಳ್ಳಲಿದೆ.
ಈಗಾಗಲೇ ಕರ್ನಾಟಕದ ಕರಾವಳಿಯಲ್ಲಿ ಭಾರೀ ಗಾಳಿ ಜೊತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗಸ್ಟ್ 6 ಮತ್ತು 7 ರಂದು ಅರೆಂಜ್ ಅಲರ್ಟ್ ಘೋಷಿಸಿದೆ. ಕಳೆದ ಕೆಲವು ದಿನಗಳಿಂದ ಕಡಿಮೆಯಾಗಿದ್ದ ಮಳೆ, ಇಂದು ಮತ್ತೆ ಪ್ರಾರಂಭವಾಗಿದೆ.
ಕರಾವಳಿಯಲ್ಲಿ ಬಿರುಗಾಳಿ ಜೊತೆ ಮಳೆಯಾಗುವ ಸಾಧ್ಯತೆ ಇರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ವಾರ್ನಿಂಗ್ ನೀಡಿದೆ. ರಾಜ್ಯಾದಾದ್ಯಂತ ಜೋರಾದ ಗಾಳಿಯೊಂದಿಗೆ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆ ಹಾಗೂ ಆಗಸ್ಟ್ 6 ಮತ್ತು 7 ರಂದು ಅಲ್ಲಲ್ಲಿ ಭಾರಿ ಮಳೆಯಾಗಲಿದೆ. ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಆಗಸ್ಟ್ 8 ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ. ಕರಾವಳಿಯ ಮೂರು ಜಿಲ್ಲೆಗಳಿಗೆ ಆರೇಂಜ್ ಮತ್ತು ಯೆಲ್ಲೋ ಆಲರ್ಟ್ ನೀಡಲಾಗಿದ್ದು, ಬಯಲು ಸೀಮೆಯ ಜಿಲ್ಲೆಗಳಲ್ಲೂ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.