Bangalore: ಮತದಾರರ ಪಟ್ಟಿ ಅಕ್ರಮ ಆರೋಪ; ಪುರಾವೆ ಸಲ್ಲಿಸಲು ರಾಹುಲ್ ಗಾಂಧಿಗೆ ಸೂಚನೆ
07/08/2025
ಮಹದೇವಪುರ ಕ್ಷೇತ್ರದಲ್ಲಿ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿರುವ ಬಗ್ಗೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬೆಂಗಳೂರಿನಲ್ಲಿ ದಾಖಲೆ ಬಿಡುಗಡೆ ಮಾಡಿದ ಬೆನ್ನಲ್ಲೇ ಈ ಕುರಿತು ಪುರಾವೆ ಸಲ್ಲಿಸುವಂತೆ ಚುನಾವಣಾ ಆಯೋಗ ಅವರಿಗೆ ಸೂಚಿಸಿದೆ. (PHOTO CREDIT: PTI)
ಪತ್ರಿಕಾಗೋಷ್ಟಿ ನಡೆಸಿದ್ದ ರಾಹುಲ್ ಗಾಂಧಿ ವಿವಿಧ ರಾಜ್ಯಗಳಲ್ಲಿ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಅಕ್ರಮಗಳು ನಡೆದಿರುವ ಬಗ್ಗೆ ಆರೋಪಿಸಿದ್ದರು. ಇದಾದ ಕೆಲವೇ ಕ್ಷಣಗಳಲ್ಲಿ ಭಾರತೀಯ ಚುನಾವಣಾ ಆಯೋಗ ರಾಹುಲ್ ಗಾಂಧಿ ಮಾಡಿರುವ ಆರೋಪಗಳ ಕುರಿತು ಪುರಾವೆಗಳನ್ನು ಸಲ್ಲಿಸುವಂತೆ ಕೇಳಿದೆ. ಮತದಾರರ ಪಟ್ಟಿಯಲ್ಲಿನ ಅಕ್ರಮದ ಬಗ್ಗೆ ಮಾಡಲಾದ ಆರೋಪಗಳ ಕುರಿತು ಪುರಾವೆಗಳನ್ನು ಆಗಸ್ಟ್ 7ರಂದು ಸಲ್ಲಿಸುವಂತೆ ಕರ್ನಾಟಕದ ಮುಖ್ಯ ಚುನಾವಣಾ ಆಯುಕ್ತರ ಕಚೇರಿಯು ರಾಹುಲ್ ಗಾಂಧಿಯವರಿಗೆ ಸೂಚಿಸಿದೆ.
ಚುನಾವಣಾ ಆಯೋಗವು ಭಾರತೀಯ ಜನತಾ ಪಕ್ಷದೊಂದಿಗೆ ಕೈಜೋಡಿಸಿ ಚುನಾವಣಾ ಪ್ರಕ್ರಿಯೆಯ ನೈತಿಕತೆಯನ್ನು ಹಾಳುಮಾಡುತ್ತಿದೆ ಎಂದು ಆರೋಪಿಸಿದ್ದ ರಾಹುಲ್ ಗಾಂಧಿ, ಕರ್ನಾಟಕದ ಮತದಾರರ ಪಟ್ಟಿಯಿಂದ ಆಯ್ದ ಭಾಗಗಳನ್ನು ಪ್ರದರ್ಶಿಸಿ ಒಂದೇ ವಿಳಾಸದಲ್ಲಿ ನೂರಾರು ಮತದಾರರು, ಅಸ್ತಿತ್ವವಿಲ್ಲದ ವಿಳಾಸಗಳು ಹಾಗೂ ನಕಲಿ ಹೆಸರುಗಳು ಸೇರಿಸಿರುವುದಾಗಿ ವಿವರಿಸಿದ್ದರು.