
Bangalore: ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ ಇಳಿಕೆ; ಮಧ್ಯರಾತ್ರಿಯಿಂದ ಪರಿಷ್ಕೃತ ದರ ಜಾರಿ
01/08/2025
ವಾಣಿಜ್ಯ ಉದ್ದೇಶಕ್ಕಾಗಿ ಬಳಸುವ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಕೊಂಚ ಇಳಿಕೆ ಮಾಡಲಾಗಿದೆ. ಆಗಸ್ಟ್ 1ರ ಮಧ್ಯರಾತ್ರಿಯಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ.
ಹೋಟೇಲ್‌ಗಳು, ರೆಸ್ಟೋರೆಂಟ್‌ಗಳು ಹಾಗೂ ಕೆಲವು ವಾಹನಗಳಲ್ಲಿ ಹೆಚ್ಚಾಗಿ ಬಳಸಲಾಗುವ ವಾಣಿಜ್ಯ ಸಿಲಿಂಡರ್‌ಗಳ ಬೆಲೆ ಮಾಡಲಾಗಿದೆ. 19 ಕೆಜಿಯ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ 33.50 ರೂಪಾಯಿಗಳಷ್ಟು ಕಡಿಮೆ ಮಾಡಲಾಗಿದೆ. ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ 1631.50ಕ್ಕೆ ಲಭ್ಯವಿದೆ. ಕೊಲ್ಕತ್ತಾದಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 1769.00 ರೂಪಾಯಿಗಳಿಂದ 1735.50 ರೂಪಾಯಿಗಳಿಗೆ ಇಳಿಸಲಾಗಿದೆ.
ಮುಂಬೈನಲ್ಲಿ 1616.50 ರೂಪಾಯಿಯಿಂದ 1583.00 ರೂಪಾಯಿಗಳಿಗೆ, ಚೆನ್ನೆöÊನಲ್ಲಿ 1823.50 ರೂಪಾಯಿಗಳಿಂದ 1790 ರೂಪಾಯಿಗಳಿಗೆ ಇಳಿಕೆ ಮಾಡಲಾಗಿದೆ. ಆದರೆ ಗೃಹ ಬಳಕೆಯ 14.2 ಕೆಜಿ ತೂಕದ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.