Bangalore: ವಿಷ್ಣುವರ್ಧನ್ ಸಮಾಧಿ ನೆಲಸಮ; ಹೆಚ್ಚುವರಿ ಪೊಲೀಸ್ ಭದ್ರತೆ
09/08/2025
ಬೆಂಗಳೂರಿನ ಉತ್ತರಹಳ್ಳಿ ರಸ್ತೆಯಲ್ಲಿರುವ ಅಭಿಮಾನ್ ಸ್ಟುಡಿಯೋದಲ್ಲಿದ್ದ ಡಾ. ವಿಷ್ಣುವರ್ಧನ್ ಸಮಾಧಿಯನ್ನು ರಾತ್ರೋ ರಾತ್ರಿ ಪೊಲೀಸ್ ಭದ್ರತೆಯಲ್ಲಿ ನೆಲ ಸಮ ಮಾಡಲಾಗಿದೆ.
ಇದು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಅಭಿಮಾನಿ ಸ್ಟುಡಿಯೋ ಮುಂಭಾಗದಲ್ಲಿ ನೆರೆದ ಸಾವಿರಾರು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದರು. ಹೀಗಾಗಿ ಉತ್ತರಹಳ್ಳಿ ರಸ್ತೆಯಲ್ಲಿ ಕೆಲ ಕಾಲ ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿತು. ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಕೆಂಗೇರಿ ಠಾಣೆ ಪೊಲೀಸರು ಭದ್ರತೆ ಒದಗಿಸಿದ್ದಾರೆ.