
Belthangady: ಸರಣಿ ಶವ ಹೂತ ಪ್ರಕರಣ; ಎಸ್‌ಐಟಿ ಕಚೇರಿಯಲ್ಲಿ ಮೊಹಾಂತಿ ನೇತೃತ್ವದಲ್ಲಿ ಸಭೆ
06/08/2025
ಧರ್ಮಸ್ಥಳದಲ್ಲಿ ಸರಣಿ ಶವಗಳನ್ನು ಹೂತಿರುವ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ತಂಡ ಮುಖ್ಯಸ್ಥ ಪ್ರಣಬ್ ಮೊಹಾಂತಿ ಅವರು ಮಂಗಳೂರಿನಿಂದ ಬೆಳ್ತಂಗಡಿಗೆ ಆಗಮಿಸಿದರು.
ಕಳೆದ 10 ದಿನಗಳಿಂದ ಧರ್ಮಸ್ಥಳದಲ್ಲಿ ದೂರುದಾರ ನೀಡಿದ ಮಾಹಿತಿಯಂತೆ ಶವ ಶೋಧ ನಡೆಸುತ್ತಿದ್ದು, ಈ ಹಿನ್ನೆಲೆಯಲ್ಲಿ ಬೆಳ್ತಂಗಡಿಗೆ ಆಗಮಿಸಿರುವ ಪ್ರಣಬ್ ಮೊಹಾಂತಿ ಸಭೆ ನಡೆಸಿದ್ದಾರೆ. ಹತ್ತು ದಿನಗಳ ಕಾರ್ಯಾಚರಣೆಯ ಬಗ್ಗೆ ಎಸ್‌ಐಟಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಈ ವೇಳೆ ಡಿಐಜಿ ಅನುಚೇತ್, ತನಿಖಾಧಿಕಾರಿ ಜಿತೇಂದ್ರ ದಯಾಮ, ಎಸಿ ಸ್ಟೆಲ್ಲಾ ವರ್ಗೀಸ್ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.