Belthangady: ಇನ್ನೋವಾ ಕಾರಿನಲ್ಲಿ ದನ ಸಾಗಾಟ; ಓರ್ವ ಪೊಲೀಸ್ ವಶ, ಇಬ್ಬರು ಪರಾರಿ
13/08/2025
ದಕ್ಷಿಣ ಕನ್ನಡ ಜಿಲ್ಲೆಯ ಗುರುವಾಯನಕೆರೆಯಲ್ಲಿ ಇನ್ನೋವಾ ಕಾರಿನಲ್ಲಿ ಹಿಂಸಾತ್ಮಕವಾಗಿ ದನವನ್ನು ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಚಾರ್ಮಾಡಿ ಕಡೆಯಿಂದ ಅತೀ ವೇಗದಲ್ಲಿ ಬರುತ್ತಿದ್ದ ಇನ್ನೋವಾ ಕಾರು ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿತ್ತು. ಹೀಗಾಗಿ ಇನ್ನೋವಾ ಕಾರನ್ನು ಟ್ರಾಫಿಕ್ ಪೊಲೀಸರು ತಡೆದು ನಿಲ್ಲಿಸಿದ್ದಾರೆ. ಈ ವೇಳೆ ನಕಲಿ ನೋಂದಣಿ ಸಂಖ್ಯೆ ಬಳಸಿ ದನ ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಓರ್ವ ಆರೋಪಿ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದು, ಇನ್ನಿಬ್ಬರು ಪರಾರಿಯಾಗಿದ್ದಾರೆ. ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.