
Belthangady: ಅಕ್ರಮ ಗಾಂಜಾ ದಾಸ್ತಾನು, ಮಾರಾಟ; ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
15/08/2025
ಅಕ್ರಮ ಗಾಂಜಾ ದಾಸ್ತಾನು ಮತ್ತು ಮಾರಾಟ ಪ್ರಕರಣಕ್ಕೆ ಸಂಬ0ಧಿಸಿ ಹಲವು ಸಮಯಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಾರ್ಕಳದಲ್ಲಿ ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ನಿವಾಸಿ ಮಹಮ್ಮದ್ ರಫೀಕ್ ಆಲಿಯಾಸ್ ಮದ್ದಡ್ಕ ರಫೀಕ್(39) ಬಂಧಿತ ಆರೋಪಿ. ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸುಬ್ಬಾಪುರ್ ಮಠ್ ನೇತೃತ್ವದ ಪೊಲೀಸರ ತಂಡ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಆರೋಪಿ ಮದಡ್ಕ ರಫೀಕ್ ವಿರುದ್ಧ ಈಗಾಗಲೇ ಬೆಳ್ತಂಗಡಿ ಪೊಲೀಸ್ ಠಾಣೆ, ವೇಣೂರು ಪೊಲೀಸ್ ಠಾಣೆ, ಚಿಕ್ಕಮಗಳೂರು ಸೆನ್ ಪೊಲೀಸ್ ಠಾಣೆ, ಬಣಕಲ್ ಪೊಲೀಸ್ ಠಾಣೆ, ದಕ ಜಿಲ್ಲಾ ಸೆನ್ ಪೊಲೀಸ್ ಠಾಣೆ, ಹಾಗೂ ಬಂಟ್ಟಾಳ ಅಬಕಾರಿ ಠಾಣೆ, ಬೆಳ್ತಂಗಡಿ ಅಬಕಾರಿ ಠಾಣೆಯಲ್ಲಿ ಗಾಂಜಾ ಪ್ರಕರಣಗಳು ದಾಖಲಾಗಿರುತ್ತದೆ.
ಆರೋಪಿಯನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.