
Bihar: ಮತಗಳ್ಳತನ ವಿರುದ್ಧ ಮತದಾರರ ಅಧಿಕಾರ ಯಾತ್ರೆ; ರಾಹುಲ್ ಗಾಂಧಿ ಚಾಲನೆ
17/08/2025
ಬಿಹಾರದಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ ನಡೆಸಿ ಅಲ್ಲಿನ ಚುನಾವಣೆಯಲ್ಲೂ ಮತ ಕಳವು ಮಾಡುವುದು ಮುಖ್ಯ ಉದ್ದೇಶವಾಗಿದೆ ಎಂದು ಸಂಸದ ರಾಹುಲ್ ಗಾಂಧಿ ಹೇಳಿದ್ದಾರೆ.
ಬಿಹಾರದಲ್ಲಿ ಮತದಾರರ ಅಧಿಕಾರ ಯಾತ್ರೆಗೆ ಚಾಲನೆ ನೀಡಿ ಅವರು ಮಾತನಾಡಿದರು. ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆಗಳಲ್ಲಿ ಮತ ಕಳವು ಮಾಡಲಾಗುತ್ತಿದೆ. ಮತ ಕಳವು ಮಾಡಲು ನಾವು ಬಿಡುವುದಿಲ್ಲ ಎಂದಿದ್ದಾರೆ.ಈ ಯಾತ್ರೆಯು ಬಿಹಾರದ 25 ಜಿಲ್ಲೆಗಳನ್ನು ಒಳಗೊಳ್ಳಲಿದೆ. ಈ ಯಾತ್ರೆಯಲ್ಲಿ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಮತ್ತು ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಭಾಗವಹಿಸಿದ್ದಾರೆ.