
Dharmasthala: 1986ರ ಪದ್ಮಲತಾ ಪ್ರಕರಣ; ಮರು ತನಿಖೆಗಾಗಿ ಎಸ್‌ಐಟಿಗೆ ದೂರು
11/08/2025
ಧರ್ಮಸ್ಥಳ ಗ್ರಾಮದಲ್ಲಿ ಮೂರು ದಶಕಗಳಿಗೂ ಹಿಂದೆ ಅತ್ಯಾಚಾರಕ್ಕೀಡಾಗಿ ಕೊಲೆಯಾದ ಪದ್ಮಲತಾ ಪ್ರಕರಣದ ಮರು ತನಿಖೆ ನಡೆಸುವಂತೆ ದೂರು ನೀಡಲು ಪದ್ಮಲತಾ ಸಹೋದರಿ ಬೆಳ್ತಂಗಡಿ ಎಸ್‌ಐಟಿ ಕಚೇರಿಗೆ ಆಗಮಿಸಿದರು.
ಆಗಸ್ಟ್ 11ರ ಸೋಮವಾರ ಪದ್ಮಲತಾ ಅವರ ಸಹೋದರಿ ಇಂದ್ರಾವತಿ ಅವರು ಸಿಪಿಎಂ ಪಕ್ಷದ ಮುಖಂಡ ಬಿ.ಎಂ.ಭಟ್ ಹಾಗೂ ಇತರರೊಂದಿಗೆ ಎಸ್‌ಐಟಿ ಕಚೇರಿಗೆ ಆಗಮಿಸಿದರು. ಎಸ್‌ಐಟಿ ಹಿರಿಯ ಅಧಿಕಾರಿಗಳು ಕಚೇರಿಗೆ ಬಂದ ಬಳಿಕ ದೂರು ನೀಡಲಾಗುವುದು ಎಂದು ತಿಳಿಸಿದರು.
ಸುಮಾರು 39 ವರ್ಷಗಳ ಹಿಂದೆ ಅಂದರೆ 1986ರಲ್ಲಿ ಬೋಳಿಯಾರು ನಿವಾಸಿ ಪದ್ಮಲತಾ ಅವರನ್ನು ಅತ್ಯಾಚಾರಗೈದು ಕೊಲೆಗೈಯಲಾಗಿತ್ತು. ಧರ್ಮಸ್ಥಳ ಗ್ರಾಮದಲ್ಲಿ ಈ ಹಿಂದೆ ನಡೆದ ಅಪರಾಧ ಕೃತ್ಯಗಳಿಗೆ ಸಂಬ0ಧಿಸಿ ದೂರುದಾರ ನೀಡಿರುವ ದೂರಿನ ಹಿನ್ನೆಲೆಯಲ್ಲಿ ತನಿಖೆಗೆ ಎಸ್‌ಐಟಿ ರಚಿಸಲಾಗಿದ್ದು, ತನಿಖೆ ನಡೆಸುತ್ತಿದೆ. ಈ ಮಧ್ಯೆ ಬೆಳ್ತಂಗಡಿಯಲ್ಲಿ ಎಸ್‌ಐಟಿ ಕಚೇರಿ ತೆರೆಯಲಾಗಿದ್ದು, ಅದಕ್ಕೆ ಠಾಣೆಯ ಸ್ಥಾನಮಾನ ನೀಡಲಾಗಿದೆ.