
Dharmasthala: ಎಸ್‌ಐಟಿ ಉತ್ಖನನ ವೇಳೆ 3 ಕಳೇಬರ ಪತ್ತೆ; ಸುಜಾತಾ ಭಟ್ ಪರ ವಕೀಲರ ಹೇಳಿಕೆ
05/08/2025
ಧರ್ಮಸ್ಥಳದಲ್ಲಿ ಸರಣಿ ಶವಗಳನ್ನು ಹೂತಿರುವ ಪ್ರಕರಣಕ್ಕೆ ಸಂಬಂಧಿಸಿ ಆಗಸ್ಟ್ 4ರಂದು ನಡೆದ ಕಾರ್ಯಾಚರಣೆ ವೇಳೆ ಮೂರು ಕಳೇಬರಗಳು ಪತ್ತೆಯಾಗಿವೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಬಗ್ಗೆ ನಾಪತ್ತೆಯಾಗಿರುವ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ಅವರ ತಾಯಿ ಸುಜಾತಾ ಭಟ್ ಪರ ವಕೀಲ ಮಂಜುನಾಥ್ ಅವರು ಈ ಹೇಳಿಕೆ ನೀಡಿದ್ದಾರೆ. ಆಗಸ್ಟ್ 4ರಂದು ದೂರುದಾರ ಗುರುತಿಸಿದ 11ನೇ ಪಾಯಿಂಟ್‌ನಲ್ಲಿ ಶೋಧ ಕಾರ್ಯಕ್ಕೆ ತೆರಳಲಾಗಿತ್ತು. ಈ ವೇಳೆ 11 ಪಾಯಿಂಟ್‌ನ 100 ಮೀಟರ್ ದೂರದ ಅರಣ್ಯದಲ್ಲಿ ದೂರುದಾರನೇ ಗುರುತಿಸಿದ ಪ್ರದೇಶದಲ್ಲಿ ಕಳೇಬರಗಳು ಪತ್ತೆಯಾಗಿತ್ತು. ಇದೀಗ ಆ ಪ್ರದೇಶದಲ್ಲಿ ಮೂರು ಕಳೇಬರ ಪತ್ತೆಯಾಗಿದ್ದು, ಅದರಲ್ಲಿ ಒಂದು ಕಳೇಬರ ಮಹಿಳೆಯದ್ದಾಗಿತ್ತು. ಪಕ್ಕದಲ್ಲಿ ಮಹಿಳೆಯ ಸೀರೆಯೂ ಪತ್ತೆಯಾಗಿದೆ ಎಂದು ಸುಜಾತಾ ಪರ ವಕೀಲ ಮಂಜುನಾಥ್ ಎನ್. ತಿಳಿಸಿದ್ದಾರೆ.