
Dharmasthala: ಯೂಟ್ಯೂಬರ್ ಗಳ ಮೇಲೆ ಹಲ್ಲೆ; ಬಂಧಿತ ಆರೋಪಿಗಳಿಗೆ ಮಧ್ಯಂತರ ಜಾಮೀನು
10/08/2025
ಧರ್ಮಸ್ಥಳದ ಪಾಂಗಾಳ ಕ್ರಾಸ್ ಬಳಿ ಯೂಟ್ಯೂಬರ್ಸ್ ಗಳ ಮೇಲೆ ಹಲ್ಲೆ ನಡೆಸಿ, ಬಳಿಕ ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದಲ್ಲಿ ಬಂಧಿತರಾದ 6 ಮಂದಿಗೆ ಸ್ಥಳೀಯ ನ್ಯಾಯಾಲಯ ಮಧ್ಯಂತರ ಜಾಮೀನು ನೀಡಿದೆ.
ಸರಣಿ ಶವ ಹೂತಿರುವ ಪ್ರಕರಣಕ್ಕೆ ಸಂಬಂಧಿಸಿ ಎಸ್ಐಟಿ ಮಾರ್ಗದರ್ಶನಲ್ಲಿ ಅಗೆಯುವ ಸಂದರ್ಭ ವರದಿ ಮಾಡಲು ಬಂದ ಯೂಟ್ಯೂರ್ಸ್ ಗಳ ಮೇಲೆ ಆರೋಪಿಗಳು ಹಲ್ಲೆ ನಡೆಸಿದ್ದು, ತಡೆಯಲು ಬಂದ ಪೊಲೀಸರ ಕರ್ತವ್ಯಕ್ಕೂ ಅಡ್ಡಿಪಡಿಸಿರುವ ಬಗ್ಗೆ ಎಫ್ಐಆರ್ ದಾಖಲಾಗಿತ್ತು. ಆರೋಪಿಗಳಾದ ಧರ್ಮಸ್ಥಳದ ಪದ್ಮಪ್ರಸಾದ್ (32), ಸುಹಾಸ್ (22) ಮತ್ತು ಶಶಿಧರ್ (30), ಉಜಿರೆಯ ಖಲಂದರ್ (42), ಕಲೆಂಜದ ಚೇತನ್ (21) ಮತ್ತು ಕಲ್ಮಂಕದ ಗುರುಪ್ರಸಾದ್ ಅವರನ್ನು ಬಂಧಿಸಿ ಶನಿವಾರ ರಾತ್ರಿ ನ್ಯಾಯಾಧೀಶರ ಮನೆಗೇ ಹಾಜರುಪಡಿಸಲಾಗಿತ್ತು.
ನ್ಯಾಯಾಧೀಶರು ಆರೋಪಿಗಳಿಗೆ ಮಧ್ಯಂತರ ಜಮೀನು ನೀಡಿ ಬಿಡುಗಡೆಗೊಳಿಸಿದ್ದು, ಆ. 11ರ ಸೋಮವಾರ ನ್ಯಾಯಾಲಯಕ್ಕೆ ಹಾಜರಾಗುವಂತೆ ಆದೇಶಿಸಿದ್ದಾರೆ.