Gangolli: ನಾಡ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಅಪರಾಧ ತಡೆ, ರಸ್ತೆ ಸುರಕ್ಷತೆ ಕುರಿತು ವಿಚಾರ ಸಂಕಿರಣ

Gangolli: ನಾಡ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಅಪರಾಧ ತಡೆ, ರಸ್ತೆ ಸುರಕ್ಷತೆ ಕುರಿತು ವಿಚಾರ ಸಂಕಿರಣ


ನಾಡ ಜನಶಕ್ತಿ ಸೇವಾ ಟ್ರಸ್ಟ್, ಪಡುಕೋಣೆ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್, ಅರಿವು ಕೇಂದ್ರ ಹಾಗೂ ಗಂಗೊಳ್ಳಿ ಠಾಣೆಯ ಜಂಟಿ ಸಹಭಾಗಿತ್ವದಲ್ಲಿ ರಸ್ತೆ ಸುರಕ್ಷತೆ, ವ್ಯಸನ ಮುಕ್ತ ಸಮಾಜ ವಿಷಯಗಳ ಕುರಿತು ವಿಚಾರ ಸಂಕಿರಣವು ನಾಡ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. 


ಕಾರ್ಯಕ್ರಮದಲ್ಲಿ ಗಂಗೊಳ್ಳಿ ಠಾಣಾ ಎಸ್‌ಐ ಪವನ್ ನಾಯ್ಕ್ ಭಾಗವಹಿಸಿ ಮಾತನಾಡಿ, ಅಪರಾಧ ಕೃತ್ಯಗಳ ತಡೆಯುವಲ್ಲಿ ಸಾರ್ವಜನಿಕರ ಪಾತ್ರದ ಕುರಿತು ಮನವರಿಕೆ ಮಾಡಿದರು. ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ವಿದ್ಯಾರ್ಥಿಗಳು ನಿರ್ವಹಿಸಬೇಕಾದ ಪಾತ್ರಗಳ ಬಗ್ಗೆ ವಿವರಿಸಿದರು. ಗಂಗೊಳ್ಳಿ ಠಾಣಾ ಸಿಬ್ಬಂದಿ ಚೇತನ್ ಮಾತನಾಡಿ, ರಸ್ತೆ ಸುರಕ್ಷತೆ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿದರು. ಈ ವೇಳೆ ನಾಡ ಜನಶಕ್ತಿ ಸೇವಾ ಟ್ರಸ್ಟ್ ಅಧ್ಯಕ್ಷ ಫಿಲಿಪ್ಸ್ ಡಿಸಿಲ್ವಾ, ನಾಡ ಪಂಚಾಯತ್ ಅಧ್ಯಕ್ಷೆ ಪಾರ್ವತಿ ಮೊಗವೀರ ಮೊದಲಾದವರು ಇದ್ದರು. 



Ads on article

Advertise in articles 1

advertising articles 2

Advertise under the article