
Hassan: ಭಾರೀ ಮಳೆ ಹಿನ್ನೆಲೆ; ಮಂಜರಾಬಾದ್ ಕೋಟೆಯ ಪಾರ್ಶ್ವ ಕುಸಿತ
03/08/2025
ಭಾರೀ ಮಳೆಯಿಂದಾಗಿ ಐತಿಹಾಸಿಕ ಹಿನ್ನೆಲೆಯುಳ್ಳ ಮಂಜರಾಬಾದ್ ಕೋಟೆಯ ಒಂದು ಭಾಗ ಕುಸಿದಿದೆ. ಸೈನಿಕರು ವಿಶ್ರಾಂತಿ ಪಡೆಯುತ್ತಿದ್ದ ಕೋಟೆಯ ಭಾಗ ಎಂದು ಹೇಳಲಾಗುವ ಪ್ರದೇಶವು ಕುಸಿದುಬಿದ್ದಿದೆ. ಮುಂಜಾನೆ ಕೋಟೆಯ ಕಾವಲು ಸಿಬ್ಬಂದಿ ಕರ್ತವ್ಯ ನಿರ್ವಹಿಸಲು ಬಂದಾಗ ಕುಸಿತಗೊಂಡಿರುವುದು ತಿಳಿದು ಬಂದಿದೆ.
ಪ್ರವಾಸಿಗರ ಆಕರ್ಷಣೆಯ ಕೇಂದ್ರವಾದ ನಕ್ಷತ್ರಾಕಾರದ ಮಂಜರಾಬಾದ್ ಕೋಟೆಯನ್ನು 1792ರಲ್ಲಿ ಟಿಪ್ಪು ಸುಲ್ತಾನ್ ಕಟ್ಟಿಸಿದ್ದು, ಕೋಟೆಯು ಸಮುದ್ರ ಮಟ್ಟದಿಂದ 988 ಮೀಟರ್ ಎತ್ತರದಲ್ಲಿದೆ. ಇದೀಗ ಕೋಟೆಯ ಒಂದು ಭಾಗ ಕುಸಿದ ಹಿನ್ನೆಲೆಯಲ್ಲಿ ಕೋಟೆ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ.