
Hebri: ಇಸ್ಪೀಟ್ ಅಡ್ಡೆಗೆ ದಾಳಿ; 6 ಮಂದಿಯ ಬಂಧನ, ನಗದು ವಶ
12/08/2025
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಹಾಡಿಯಲ್ಲಿ ಇಸ್ಪೀಟ್ ಅಡ್ಡೆಗೆ ದಾಳಿ ನಡಸಿದ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ.
ಬಂಧಿತರನ್ನು ಉದಯ ನಾಯ್ಕ, ಶಿವರಾಮ ಶೆಟ್ಟಿ, ಕಿರಣ ನಾಯ್ಕ, ಆನಂದ, ಅಶೋಕ, ಸುರೇಶ್ ನಾಯ್ಕ ಎಂದು ಗುರುತಿಸಲಾಗಿದೆ. ಹೆಬ್ರಿ ತಾಲೂಕಿನ ವರಂಗ ಗ್ರಾಮದ ಮುನಿಯಾಲು ಬೈಲು ಎಂಬಲ್ಲಿ ಸರ್ಕಾರಿ ಹಾಡಿಯಲ್ಲಿ ಹಣವನ್ನು ಪಣಕ್ಕಿಟ್ಟು ಇಸ್ಪೀಟು ಆಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ, ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿ0ದ 3,390 ರೂಪಾಯಿ ನಗದು, ಇಸ್ಪೀಟು ಎಲೆಗಳನ್ನು ವಶಕ್ಕೆ ಪಡೆಯಲಾಗಿದೆ. ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.