
Jharkhand: ಅಮಿತ್ ಶಾ ವಿರುದ್ಧ ಮಾನಹಾನಿ ಪ್ರಕರಣ; ರಾಹುಲ್‌ಗಾಂಧಿಗೆ ಜಾಮೀನು
06/08/2025
2018ರ ಚುನಾವಣಾ ರ‍್ಯಾಲಿಯಲ್ಲಿ ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಪ್ರಕರಣದಲ್ಲಿ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ಜಾಮೀನು ಸಿಕ್ಕಿದೆ.
ಪ್ರಕರಣಕ್ಕೆ ಸಂಬ0ಧಿಸಿ ಜಾರ್ಖಂಡ್‌ನ ಚೈಬಾಸಾದ ಜನಪ್ರತಿನಿಧಿಗಳ ನ್ಯಾಯಾಲಯ ಆಗಸ್ಟ್ 6ರಂದು ಜಾಮೀನು ಮಂಜೂರು ಮಾಡಿದೆ. ಜಾರ್ಖಂಡ್ ಹೈಕೋರ್ಟ್ ನಿರ್ದೇಶನದ ಪ್ರಕಾರ ಬೆಳಗ್ಗೆ 10.55ರ ಸುಮಾರಿಗೆ ರಾಹುಲ್ ಗಾಂಧಿ ನ್ಯಾಯಾಲಯದ ಮುಂದೆ ಖುದ್ದು ಹಾಜರಾದರು. ರಾಹುಲ್ ಗಾಂಧಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಜಾಮೀನು ಮಂಜೂರು ಆಗಿದೆ.