
Kadaba: ಭಾರೀ ಗಾಳಿ, ಮಳೆ; ಸವಣೂರಿನ ಹಲವೆಡೆ ಅಪಾರ ಹಾನಿ
19/08/2025
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸವಣೂರು ಪರಿಸರದಲ್ಲಿ ಆಗಸ್ಟ್ 19ರ ಮುಂಜಾನೆ ಬೀಸಿದ ಭಾರೀ ಗಾಳಿಯಿಂದಾಗಿ ಹಲವೆಡೆ ಹಾನಿಗಳಾಗಿದ್ದು, ಅಪಾರ ಪ್ರಮಾಣದ ನಷ್ಟಗಳುಂಟಾಗಿವೆ.
ಸವಣೂರು ಮೆಸ್ಕಾಂ ಉಪವಿಭಾಗದ ಸವಣೂರು ಗ್ರಾಮದ ಕೆಡೆಂಜಿ, ಆರೇಲ್ತಡಿ, ಕುದ್ಮನಮಜಲು, ಪಟ್ಟೆ ಮಡಕೆ, ಕುದ್ಮಾರು ಗ್ರಾಮದ ಅನ್ಯಾಡಿ ಪರಿಸರದಲ್ಲಿ ಮರ ಬಿದ್ದು ಸುಮಾರು ವಿದ್ಯುತ್ ಕಂಬಗಳು ಮುರಿದು ವಿದ್ಯುತ್ ಸಂಪರ್ಕ ಕಡಿತವಾಗಿದೆ.
ಆರೇಲ್ತಡಿ ಕೊರಗಜ್ಜನ ಕಟ್ಟೆ, ದೈವಸ್ಥಾನದ ಪ್ರದೇಶ, ಹಲವರ ವಾಸದ ಮನೆಗಳು, ಅಡಿಕೆ ತೋಟ, ತೆಂಗಿನ ಮರಗಳು ಸೇರಿದಂತೆ ಲಕ್ಷಾಂತರ ನಷ್ಟ ಉಂಟಾಗಿದೆ.