
Kaup: ಅಲೆಗಳ ಅಬ್ಬರಕ್ಕೆ ಮಗುಚಿದ ನಾಡ ದೋಣಿ; 7 ಜನ ಮೀನುಗಾರರ ರಕ್ಷಣೆ
04/08/2025
ಮೀನುಗಾರಿಕೆಗೆ ತೆರಳಿದ ನಾಡ ದೋಣಿಯೊಂದು ಅಲೆಗಳ ರಭಸಕ್ಕೆ ಸಿಲುಕಿ ಮಗುಚಿ ಬಿದ್ದ ಘಟನೆ ಕಾಪು ಲೈಟ್ ಹೌಸ್ ಬಳಿ ನಡೆದಿದೆ.
ದೋಣಿಯಲ್ಲಿದ್ದ 7 ಜನ ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ. ಮೀನುಗಾರಿಕಾ ಟ್ರಾಲ್ ದೋಣಿ ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿತ್ತು. ಕಾಪು ತಲುಪುತ್ತಿದ್ದಂತೆ ಬೃಹತ್ ಗಾತ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ಮಗುಚಿ ಬಿದ್ದಿದೆ. ದೋಣಿಯಲ್ಲಿದ್ದ ಮೀನುಗಾರರನ್ನು ಸ್ಥಳೀಯ ಮೀನುಗಾರರಾದ ಪ್ರಶಾಂತ್ ಮತ್ತು ವಿನೋದ್ ರಕ್ಷಣೆ ಮಾಡಿದ್ದಾರೆ.