
Kaup: ಎಲ್ಲೂರಿನ ದುರ್ಗಾ ನಗರದಲ್ಲಿ ಅಂಗನವಾಡಿ ಕಟ್ಟಡ ಉದ್ಘಾಟನೆ
15/08/2025
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಹಾಗೂ ಕಾಪು ತಾಲೂಕು ಪಂಚಾಯತ್ ಸಹಯೋಗದಲ್ಲಿ ಎಲ್ಲೂರಿನ ದುರ್ಗಾ ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಅಂಗನವಾಡಿ ಕಟ್ಟಡವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಆರ್. ಹೆಬ್ಬಾಳ್ಕರ್ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಾಯಲ್, ಉಪ ವಿಭಾಗಧಿಕಾರಿ ಎಸ್.ಆರ್. ರಶ್ಮಿ, ತಹಶಿಲ್ದಾರ್ ಪ್ರತಿಭಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಶ್ಯಾಮಲಾ ಮತ್ತಿತರರು ಉಪಸ್ಥಿತರಿದ್ದರು.