Malpe: ಮನೆ ಮನೆಗೆ ಪೊಲೀಸ್, ಸೆಕ್ಯೂರಿಟಿ ಗಾರ್ಡ್ ನೇಮಕದ ದೃಷ್ಟಿ ಯೋಜನೆಗೆ ಚಾಲನೆ
06/08/2025
ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆ ಮನೆ ಪೊಲೀಸ್ ಭೇಟಿ ಕಾರ್ಯಕ್ರಮ ಹಾಗೂ ರಾತ್ರಿ ಕಳ್ಳತನ ನಡೆಯುವುದನ್ನು ತಡೆಗಟ್ಟಲು ಸೆಕ್ಯೂರಿಟಿ ಗಾರ್ಡ್ ನೇಮಕ ಮಾಡುವ ದೃಷ್ಟಿ ಯೋಜನೆಯನ್ನು ಪ್ರಾರಂಭಿಸಲಾಗಿದೆ. ಕಾರ್ಯಕ್ರಮವನ್ನು ಅಂಬಲಪಾಡಿ ಗ್ರಾಮಪಂಚಾಯತ್ ಕಿದಿಯೂರು ಗ್ರಾಮದ ಕಪ್ಪೆಟ್ಟು ವಾರ್ಡ್ನ ದೇವಿ ಸಭಾಭವನದಲ್ಲಿ ಉದ್ಘಾಟಿಸಲಾಯಿತು. ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಉಪ ವಿಭಾಗದ ಡಿವೈಎಸ್ಪಿ ಪ್ರಭು ಡಿ.ಟಿ ಮೊದಲಾದವರು ಇದ್ದರು.