Mangalore: ಗಾಂಜಾ ಸಾಗಾಟ; ಮೂವರ ಬಂಧನ, 123 ಕೆಜಿ ಗಾಂಜಾ ವಶ
04/08/2025
ಅಕ್ರಮವಾಗಿ ಮಾದಕ ವಸ್ತುಗಳನ್ನು ಸಾಗಾಟ ಮಾಡುತ್ತಿರುವ ಪ್ರಕರಣವನ್ನು ಮಂಗಳೂರು ಸಿಸಿಬಿ ಪೊಲೀಸರು ಬೇಧಿಸಿದ್ದಾರೆ.
ದಾಳಿ ನಡೆಸಿದ ಪೊಲೀಸರು 123 ಕೆಜಿ ಗಾಂಜಾ ಹಾಗೂ ಸಾಗಾಟಕ್ಕೆ ಬಳಸಿದ ವಾಹನವನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರು ಆಂಧ್ರಪ್ರದೇಶದಿಂದ ಗಾಂಜಾ ಸಾಗಾಟ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ರೈಲಿನಲ್ಲಿ ಗಾಂಜಾ ಸಾಗಾಟ ಮಾಡುತ್ತಿರುವ ಮಾಹಿತಿಯ ಮೇರೆಗೆ ರೈಲ್ವೇ ನಿಲ್ದಾಣಗಳಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.