
Mangalore: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ; 13 ಕಡೆ ಎನ್‌ಐಎ ದಾಳಿ
02/08/2025
ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟಿçÃಯ ತನಿಖಾ ಸಂಸ್ಥೆಯು ಮಂಗಳೂರಿನ ಬಲ್ಪೆ ಹಾಗೂ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಹಲವು ಕಡೆ ದಾಳಿ ನಡೆಸಿದೆ. ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಮನೆ ಮೇಲೆಯೂ ದಾಳಿ ನಡೆಸಲಾಗಿದೆ. ಸುಮಾರು 13 ಕಡೆಗಳಲ್ಲಿ ಎನ್‌ಐಎ ಅಧಿಕಾರಿಗಳು ಬೆಳಿಗ್ಗೆ 6 ಗಂಟೆ ಸುಮಾರಿಗೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.