Mangalore: ಎರಡು ಕಾರುಗಳ ನಡುವೆ ಅಪಘಾತ; ಮೂವರು ಗಂಭೀರ (Video)
01/08/2025
ಕಿನ್ನಿಗೋಳಿ ಸಮೀಪದ ಕೆರೆಕಾಡು ಬಳಿ ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿ ಮಗು ಸಹಿತ ಮೂವರು ಗಂಭೀರ ಗಾಯಗೊಂಡಿದ್ದಾರೆ.
ಕುಂದಾಪುರ ತೆಕ್ಕಟ್ಟೆ ನಿವಾಸಿಗಳಾದ ನಿತಿಲ್ (25), ಅವಿನಾಶ್ (23), ಮಗು ಮೃತ್ವಿನ್ (2) ಎಂದು ಗುರುತಿಸಲಾಗಿದೆ. ಇನ್ನೊಂದು ಕಾರಿನಲ್ಲಿದ್ದ ಮೂಲ್ಕಿ ಮೂಲದ ಮೂವರು ಯುವಕರು ಸಣ್ಣಪುಟ್ಟ ಗಾಯಗೊಂಡಿದ್ದಾರೆ.
ಕಟೀಲು ಕಡೆಯಿಂದ ಕುಂದಾಪುರ ಕಡೆಗೆ ಹೊರಟಿದ್ದ ಕಾರು ಹಾಗೂ ಮೂಲ್ಕಿ ಕಡೆಯಿಂದ ಬರುತ್ತಿದ್ದ ಕಾರಿನ ನಡುವೆ ಹೊಂಡ ತಪ್ಪಿಸುವ ವೇಳೆ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ಎರಡೂ ಕಾರುಗಳೂ ಪಲ್ಟಿಯಾಗಿದೆ. ಕಾರಿನಲ್ಲಿ ಸಿಲುಕಿಕೊಂಡವರನ್ನು ಸ್ಥಳೀಯರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಅಪಘಾತ ನಡೆದ ದೃಶ್ಯ ಸ್ಥಳೀಯ ಅಂಗಡಿ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
(ಸಿಸಿ ಕ್ಯಾಮರಾದಲ್ಲಿ ಸೆರೆಯಾದ ದೃಶ್ಯ)