
Mangalore: ಗ್ರಾಮಾಂತರ, ಕಂಕನಾಡಿ ನಗರ ಠಾಣೆಯ ವ್ಯಾಪ್ತಿ ಮರು ವಿಂಗಡಣೆ
14/08/2025
ಮಂಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಂಗಳೂರು ಗ್ರಾಮಾಂತರ (ವಾಮಂಜೂರು) ಮತ್ತು ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರದೇಶವನ್ನು ಆಗಸ್ಟ್ ೧೫ರಿಂದ ಅನ್ವಯವಾಗುವಂತೆ ಮರು ವಿಂಗಡಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಗೆ ಒಳಪಡುವ ಅಡ್ಯಾರು ಮತ್ತು ಅರ್ಕುಳ ಗ್ರಾಮಗಳನ್ನು ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಗೆ ಹಾಗೂ ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪದವು ಗ್ರಾಮವನ್ನು ಮಂಗಳೂರು ಗ್ರಾಮಾಂತರ (ವಾಮಂಜೂರು) ಪೊಲೀಸ್ ಠಾಣಾ ವ್ಯಾಪ್ತಿಗೆ ಸೇರಿಸಲಾಗಿದೆ ಎಂದು ಆಯುಕ್ತ ಸುಧೀರ್ ರೆಡ್ಡಿ ತಿಳಿಸಿದ್ದಾರೆ.