Mangalore: ಗಾಂಜಾ ಸಾಗಾಟ ಜಾಲ ಪತ್ತೆ; ಆರೋಪಿಗಳನ್ನು ಬಂಧಿಸಿದ ಸಿಸಿಬಿ ಪೊಲೀಸರು

Mangalore: ಗಾಂಜಾ ಸಾಗಾಟ ಜಾಲ ಪತ್ತೆ; ಆರೋಪಿಗಳನ್ನು ಬಂಧಿಸಿದ ಸಿಸಿಬಿ ಪೊಲೀಸರು


ಆಂಧ್ರಪ್ರದೇಶದಿಂದ ಮಂಗಳೂರಿಗೆ 123 ಕೆಜಿ ಗಾಂಜಾ ತೆಗೆದುಕೊಂಡು ಬರುತ್ತಿದ್ದ ದೊಡ್ಡ ಗ್ಯಾಂಗ್ ನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಕೇರಳ ರಾಜ್ಯದ ನಿವಾಸಿಗಳಾದ ಮಸೂದ್ ಎಂಕೆ (45), ಮೊಹಮ್ಮದ್ ಆಶಿಕ್ (24), ಸುಬೇರ್ (30) ಎಂದು ಗುರುತಿಸಲಾಗಿದೆ. 2 ಕಾರುಗಳಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಜುಲೈ 31ರಂದು ಮೂಡಬಿದಿರೆ ತಾಲ್ಲೂಕಿನ ಬೆಳುವಾಯಿ ಗ್ರಾಮದ ಕಾಂತಾವರ ಕ್ರಾಸ್ ನ ಮಠದಕೆರೆ ಎಂಬ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ. 

ಗಾಂಜಾ ಹೇರಿಕೊಂಡು ಮಂಗಳೂರು ಕಡೆಗೆ ಬರುತ್ತಿದ್ದ 2 ವಾಹನಗಳನ್ನು ಪತ್ತೆಹಚ್ಚಿದ್ದಾರೆ. ಪೊಲೀಸರು ಆರೋಪಿಗಳಿಂದ 123 ಕೆಜಿ ಗಾಂಜಾ, ಎರಡು ವಾಹನಗಳು (KA-21-P-9084 ಹಾಗೂ KL-14-AF-7010) ಮತ್ತು 5 ಮೊಬೈಲ್ ಫೋನುಗಳನ್ನು ವಶಪಡಿಸಿಕೊಂಡಿದ್ದು, ಈ ಎಲ್ಲಾ ಸೊತ್ತಿನ ಒಟ್ಟು ಮೌಲ್ಯ ಸುಮಾರು ರೂ. 46,20,000. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Ads on article

Advertise in articles 1

advertising articles 2

Advertise under the article