
Manipal: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಚಾಲಕ ಪರಾರಿ
04/08/2025
ಅತೀ ವೇಗದಿಂದ ಬಂದ ಕಾರೋಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮಣಿಪಾಲ ಪೊಲೀಸ್ ಠಾಣೆಯ ಎದುರಿನ ರಸ್ತೆಯಲ್ಲಿ ನಡೆದಿದೆ. ಘಟನೆ ನಡೆದ ಕೂಡಲೇ ಚಾಲಕ ಕಾರನ್ನು ಅಲ್ಲೇ ಬಿಟ್ಟು ಎಸ್ಕೇಪ್ ಆಗಿದ್ದಾನೆ.
ಮಣಿಪಾಲದಿಂದ ಉಡುಪಿಯತ್ತ ಅತೀ ವೇಗದಿಂದ ಬಂದ ಕಾರು ಏಕಾಏಕಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಘಟನೆಯಿಂದ ವಿದ್ಯುತ್ ತಂತಿಗಳು ರಸ್ತೆಗೆ ಬಿದ್ದಿತ್ತು. ಬೆಂಗಳೂರು ನೋಂದಣಿಯ ಕಾರಿನಲ್ಲೇ ಚಾಲಕ ಒಬ್ಬನೇ ಇದ್ದ ಎಂದು ತಿಳಿದು ಬಂದಿದೆ.
ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.