
Mumbai: 60 ಕೋಟಿ ರೂಪಾಯಿ ವಂಚನೆ ಆರೋಪ; ಶಿಲ್ಪಾ ಶೆಟ್ಟಿ ದಂಪತಿ ವಿರುದ್ಧ ದೂರು
14/08/2025
ಮುಂಬೈ ಮೂಲದ ಉದ್ಯಮಿಗೆ 60 ಕೋಟಿ ರೂಪಾಯಿ ವಂಚಿಸಿರುವ ಆರೋಪದಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಹಾಗೂ ಪತಿ ರಾಜ್ ಕುಂದ್ರಾ ವಿರುದ್ಧ ಪ್ರಕರಣ ದಾಖಲಾಗಿದೆ.
ಲೋಟಸ್ ಕ್ಯಾಪಿಟಲ್ ಫೈನಾನ್ಶಿಯಲ್ ಸರ್ವಿಸಸ್ ನಿರ್ದೇಶಕ ದೀಪಕ್ ಕೊಠಾರಿ ಅವರು ಜುಹು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಉದ್ಯಮಿ ದೀಪಕ್ ಕೊಠಾರಿ ಅವರು 2015-2023 ರವರೆಗೆ ವ್ಯವಹಾರ ವಿಸ್ತರಣೆಗಾಗಿ 60.48 ಕೋಟಿ ರೂ.ಗಳನ್ನು ನೀಡಿದ್ದರು. ಆದರೆ ಕುಂದ್ರಾ ದಂಪತಿ ಅದನ್ನು ತಮ್ಮ ವೈಯಕ್ತಿಕ ವೆಚ್ಚಗಳಿಗೆ ಖರ್ಚು ಮಾಡಿದ್ದಾರೆ ಎಂದು ಉದ್ಯಮಿ ಆರೋಪಿಸಿದ್ದಾರೆ.