
Mumbai: ಭಾರೀ ಮಳೆಯಿಂದ ಭೂಕುಸಿತ; ಇಬ್ಬರು ಸಾವು; ಮತ್ತಿಬ್ಬರು ಗಂಭೀರ
16/08/2025
ಮು0ಬೈನಲ್ಲಿ ರಾತ್ರಿಯಿಂದ ನಿರಂತರ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಭಾರೀ ಮಳೆಯಿಂದಾಗಿ ಇಬ್ಬರು ಮೃತಪಟ್ಟಿದ್ದಾರೆ.
ರಸ್ತೆಗಳು ಮಳೆಯಿಂದಾಗಿ ಜಲಾವೃತವಾಗಿದೆ. ಭಾರತೀಯ ನಗರದ ವಿಖ್ರೋಲಿ ಪಶ್ಚಿಮ ಪ್ರದೇಶದ ವರ್ಷಾ ನಗರದಲ್ಲಿ ಭೂಕುಸಿತ ಸಂಭವಿಸಿ ಇಬ್ಬರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿದೆ. ಸಿಯಾನ್, ಕುರ್ಲಾ, ಚೆಂಬೂರ್ ಮತ್ತು ಅಂಧೇರಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗಿದ್ದು, ರಸ್ತೆಗಳಲ್ಲಿ ನೀರು ತುಂಬಿಕೊ0ಡಿದೆ.
ಹವಾಮಾನ ಇಲಾಖೆಯ ಮಾಹಿತಿಯಂತೆ ಮುಂಬೈ ಮತ್ತು ನೆರೆಯ ರಾಯಗಢ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.