Nelamangala: ಧರ್ಮಸ್ಥಳ ಕ್ಷೇತ್ರದ ಅಪಪ್ರಚಾರ; ಬಿಜೆಪಿಯಿಂದ ಧರ್ಮಸ್ಥಳ ಚಲೋ

Nelamangala: ಧರ್ಮಸ್ಥಳ ಕ್ಷೇತ್ರದ ಅಪಪ್ರಚಾರ; ಬಿಜೆಪಿಯಿಂದ ಧರ್ಮಸ್ಥಳ ಚಲೋ


ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿ ರಾಜ್ಯ ಬಿಜೆಪಿ ವತಿಯಿಂದ ನೆಲಮಂಗಲ ಟೋಲ್ ಬಳಿ ಧರ್ಮಸ್ಥಳ ಚಲೋಗೆ ಚಾಲನೆ ನೀಡಲಾಗಿದೆ.


ಶಾಸಕ ಎಸ್.ಆರ್. ವಿಶ್ವನಾಥ್ ಅವರ ನೇತೃತ್ವದಲ್ಲಿ ಸುಮಾರು 300 ಕ್ಕೂ ಹೆಚ್ಚು ಕಾರುಗಳಲ್ಲಿ ಬಿಜೆಪಿ ಕಾರ್ಯಕರ್ತರು ಧರ್ಮಸ್ಥಳಕ್ಕೆ ತೆರಳಿದರು. ಈ ಸಂದರ್ಭದಲ್ಲಿ ಹಾಲು ಪ್ರಕೋಷ್ಠದ ರಾಜ್ಯ ಸಂಚಾಲಕ ಬೇಲೂರು ರಾಘವೇಂದ್ರ ಶೆಟ್ಟಿ, ಪ್ರಮುಖರು, ಕಾರ್ಯಕರ್ತರು, ಅಭಿಮಾನಿಗಳು ಇದ್ದರು.

 ಮಾಧ್ಯಮದೊಂದಿಗೆ ಮಾತನಾಡಿದ ಎಸ್.ಆರ್.ವಿಶ್ವನಾಥ್, ಎಸ್‌ಐಟಿ ತನಿಖೆಯನ್ನು ನಾವು ಸ್ವಾಗತಿಸಿದ್ದೆವು. ಆದರೆ ಕೆಲವು ಹಿಂದೂ ವಿರೋಧಿ ಮತ್ತು ಧರ್ಮಸ್ಥಳ ವಿರೋಧಿಗಳು ತನಿಖೆಯ ದಿಕ್ಕು ತಪ್ಪಿಸುತ್ತಿದ್ದಾರೆ. ಹಾಗಾಗಿ ನಾವು ಇದರ ವಿರುದ್ಧ ಧ್ವನಿ ಎತ್ತಿದ್ದೇವೆ. ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮತ್ತು ಮಂಜುನಾಥ ಸ್ವಾಮಿಗೆ ಕಳಂಕ ತರುವ ಹುನ್ನಾರ ನಡೆಯುತ್ತಿದೆ. ಈ ಹಿನ್ನೆಲೆ ನಾವು ಧರ್ಮಸ್ಥಳ ಚಲೋಗೆ ಕರೆ ನೀಡಿದ್ದೇವೆ. ನಮ್ಮ ನಿರೀಕ್ಷೆ ಮೀರಿ ಜನ ಬಂದಿದ್ದಾರೆ" ಎಂದು ಹೇಳಿದರು.



Ads on article

Advertise in articles 1

advertising articles 2

Advertise under the article