national New Delhi: ವಾಯುಭಾರ ಕುಸಿತ; ಆ.17ರವರೆಗೆ ಭಾರೀ ಮಳೆ 13/08/2025 ವಾಯುಭಾರ ಕುಸಿತ ಹಾಗೂ ಚಂಡ ಮಾರುತದ ಪ್ರಭಾವದಿಂದಾಗಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಭಾರತದ ಕರ್ನಾಟಕವೂ ಸೇರಿದಂತೆ ವಿವಿಧ ಕಡೆಗಳಲ್ಲಿ ಧಾರಾಕಾರ ಮಳೆಯಾಗಲಿದೆ. ಆಗಸ್ಟ್ 17ರವರೆಗೆ ಕರ್ನಾಟಕ ಕರಾವಳಿಯಲ್ಲೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.