
New Delhi: ಆ.17ರಂದು ಚುನಾವಣಾ ಆಯೋಗ ಸುದ್ಧಿಗೋಷ್ಟಿ; ಮತಗಳ್ಳತನ ಆರೋಪಕ್ಕೆ ಸ್ಪಷ್ಟನೆ
16/08/2025
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿರುವ ಬೆನ್ನಲ್ಲೇ ಆಗಸ್ಟ್ 17ರಂದು ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಟಿ ನಡೆಸಲಿದೆ.
ಮತಗಳ್ಳತನ ಆರೋಪಕ್ಕೆ ಸಂಬ0ಧಿಸಿ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಲಿದೆ ಎಂದು ತಿಳಿದು ಬಂದಿದೆ. ನವದೆಹಲಿಯ ಕೇಂದ್ರ ಚುನಾವಣಾ ಆಯೋಗದ ಕಚೇರಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರು ಆಗಸ್ಟ್ 17ರ ಮದ್ಯಾಹ್ನ 3 ಗಂಟೆಗೆ ಸುದ್ದಿಗೋಷ್ಟಿ ನಡೆಸಲಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಆರೋಪಗಳಿಗೆ ನಾಳೆ ದಾಖಲೆ ಸಹಿತ ಸ್ಪಷ್ಟನೆ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.