
New Delhi: 2023ನೇ ಸಾಲಿನ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ; "ಕೇರಳ ಸ್ಟೋರಿ"ಗೆ ಪ್ರಶಸ್ತಿ
02/08/2025
2023 ನೇ ಸಾಲಿನ ರಾಷ್ಟ್ರೀಯ ಪ್ರಶಸ್ತಿ ಪ್ರಕಟಗೊಂಡಿದ್ದು, ವಿವಾದಾತ್ಮಕ ಸಿನಿಮಾ "ದಿ ಕೇರಳ ಸ್ಟೋರಿ"ಯ ಸುದಿಪ್ತೋ ಸೇನ್ ಅವರಿಗೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ ಸಿಕ್ಕಿದೆ.
ಬಾಲಿವುಡ್ ನಟ ಶಾರುಕ್ ಖಾನ್ ಮತ್ತು ವಿಕ್ರಾಂತ್ ಮೇಸಿ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ಸಿಕ್ಕಿದೆ. ಜವಾನ್ ಚಿತ್ರದ ಅಭಿನಯಕ್ಕಾಗಿ ಶಾರುಕ್ ಖಾನ್‌ಗೆ ಪ್ರಶಸ್ತಿ ಲಭಿಸಿದರೆ ವಿಕ್ರಾಂತ್ ಅವರಿಗೆ ಟ್ವೆಲ್ತ್ ಫೇಲ್ ಚಿತ್ರದ ಅಭಿನಯಕ್ಕೆ ಪ್ರಶಸ್ತಿ ಸಿಕ್ಕಿದೆ. ಇನ್ನು ಮಿಸ್ಟೆçಸ್ ಚಟರ್ಜಿ ವರ್ಸಸ್ ನಾರ್ವೆ ಚಿತ್ರದ ಅಭಿನಯಕ್ಕಾಗಿ ಬಾಲಿವುಡ್ ನಟಿ ರಾಣಿ ಮುಖರ್ಜಿ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ಸಿಕ್ಕಿದೆ.
ಇನ್ನು ವಿವಾದಾತ್ಮಕ ಚಿತ್ರ ದಿ ಕೇರಳ ಸ್ಟೋರಿಗೆ ಪ್ರಶಸ್ತಿ ಲಭಿಸಿರುವುದಕ್ಕೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆಕ್ರೋಶ ಹೊರಹಾಕಿದ್ದಾರೆ. ಕೋಮುವಾದವನ್ನು ಪ್ರಚೋದಿಸಲು ಹಾಗೂ ಕೇರಳಕ್ಕೆ ಅವಹೇಳನ ಮಾಡಲು ಪ್ರಯತ್ನಿಸಿದ ಚಿತ್ರವನ್ನು ಪ್ರೋತ್ಸಾಹಿಸುವ ಮೂಲಕ ತೀರ್ಪುಗಾರರು ಸಿನಿಮಾ ರಂಗವನ್ನು ಅವಮಾನಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.