
New Delhi: ಉಪರಾಷ್ಟ್ರಪತಿ ಆಯ್ಕೆಗೆ ಚುನಾವಣೆ ನಿಗದಿ; ಆ. 21 ನಾಮಪತ್ರ ಸಲ್ಲಿಕೆ, ಸೆ. 9ರಂದು ಚುನಾವಣೆ
01/08/2025
ಭಾರತದ ಉಪ ರಾಷ್ಟ್ರಪತಿ ಆಯ್ಕೆಗೆ ಸೆಪ್ಟೆಂಬರ್ 9ರಂದು ಚುನಾವಣಾ ದಿನಾಂಕ ನಿಗದಿಯಾಗಿದೆ. ಭಾರತೀಯ ಚುನಾವಣಾ ಆಯೋಗ ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಚುನಾವಣಾ ಪ್ರಕ್ರಿಯೆಯನ್ನು ಆರಂಭಿಸಿದ್ದು, ಸೆಪ್ಟೆಂಬರ್ 9 ರಂದು ಚುನಾವಣೆ ನಡೆಯಲಿದೆ. ಆಗಸ್ಟ್ 21 ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕವಾಗಿದೆ. ಇನ್ನು ಉಪರಾಷ್ಟ್ರಪತಿ ಚುನಾವಣೆಯಲ್ಲಿ ರಾಜ್ಯಸಭೆ ಮತ್ತು ಲೋಕಸಭಾ ಸದಸ್ಯರು ಮಾತ್ರ ರಹಸ್ಯ ಮತದಾನ ಮತ್ತು ಅನುಪಾತದ ವ್ಯವಸ್ಥೆಯನ್ನು ಬಳಸಿ ಮತ ಚಲಾಯಿಸುತ್ತಾರೆ.
ಉಪರಾಷ್ಟ್ರಪತಿ ಚುನಾವಣೆಯು ಅನುಪಾತದ ಪ್ರಾತಿನಿಧ್ಯವನ್ನು ಆಧರಿಸಿದ ಏಕ ವರ್ಗಾವಣೆ ಮತ ವ್ಯವಸ್ಥೆಯನ್ನು ಬಳಸುತ್ತದೆ. ಈ ವ್ಯವಸ್ಥೆಯಲ್ಲಿ, ಸಂಸದರು ಅಭ್ಯರ್ಥಿಗಳನ್ನು ಆದ್ಯತೆಯ ಕ್ರಮದಲ್ಲಿ ಶ್ರೇಣೀಕರಿಸುತ್ತಾರೆ.