
New Delhi: 79ನೇ ಸ್ವಾತಂತ್ರ‍್ಯ ದಿನಾಚರಣೆ; ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ (Video)
15/08/2025
79ನೇ ಸ್ವಾತಂತ್ರ‍್ಯ ದಿನಾಚರಣೆಯ ಅಂಗವಾಗಿ ರಾಜಧಾನಿ ದೆಹಲಿಯ ಕೆಂಪು ಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಧ್ವಜಾರೋಹಣ ನೆರವೇರಿಸಿದರು.
ಧ್ವಜಾರೋಹಣಕ್ಕೂ ಮೊದಲು ಪ್ರಧಾನಿ ಅವರು ರಾಜ್‌ಘಾಟ್‌ನಲ್ಲಿರುವ ಮಹಾತ್ಮಾ ಗಾಂಧಿ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು.ಈ ಸಂದರ್ಭದಲ್ಲಿ, ಭಾರತೀಯ ವಾಯುಪಡೆಯ ಎರಡು Mi-17 ಹೆಲಿಕಾಪ್ಟರ್‌ಗಳು ಕೆಂಪು ಕೋಟೆಯ ಮೇಲೆ ಪುಷ್ಪವೃಷ್ಟಿಗೈದವು. ಒಂದು ಹೆಲಿಕಾಪ್ಟರ್ ಧ್ವಜದೊಂದಿಗೆ ಹಾರಿದರೆ, ಇನ್ನೊಂದು ಹೆಲಿಕಾಪ್ಟರ್‌ನಲ್ಲಿ ಆಪರೇಷನ್ ಸಿಂಧೂರ ಬ್ಯಾನರ್ ಅನ್ನು ಪ್ರದರ್ಶಿಸಲಾಯಿತು.