
New Delhi: ಭಾರೀ ಮಳೆಯಿಂದಾಗಿ ತಡೆಗೋಡೆ ಕುಸಿತ; 8 ಮಂದಿ ಸಾವು, ಹಲವರಿಗೆ ಗಾಯ
09/08/2025
ಆಗ್ನೇಯ ದಿಲ್ಲಿಯ ಜೈತ್‌ಪುರ ಪ್ರದೇಶದ ಹರಿ ನಗರದಲ್ಲಿ ಭಾರೀ ಮಳೆಯಿಂದಾಗಿ ದೇವಾಲಯಕ್ಕೆ ಹೊಂದಿಕೊ0ಡಿರುವ ಗೋಡೆಯ ಒಂದು ಭಾಗ ಕುಸಿದು ಇಬ್ಬರು ಮಕ್ಕಳು ಸೇರಿದಂತೆ 8 ಜನರು ಮೃತಪಟ್ಟಿರುವ ಘಟನೆ ನಡೆದಿದೆ.
ಮೃತರನ್ನು ಶಬೀಬುಲ್ (30), ರಬೀಬುಲ್ (30), ಮುತ್ತು ಅಲಿ (45), ರುಬಿನಾ (25), ಡಾಲಿ (25), ಹಶಿಬುಲ್, ರುಖ್ಸಾನಾ (6), ಮತ್ತು ಹಸೀನಾ (7) ಎಂದು ಗುರುತಿಸಲಾಗಿದೆ.
ಹಳೆಯ ದೇವಾಲಯದ ಪಕ್ಕದಲ್ಲಿರುವ ಗೋಡೆ ಹಠಾತ್ತನೆ ಕುಸಿದು ಬಿದ್ದಿದೆ. ಪಕ್ಕದ ಕೊಳೆಗೇರಿಗಳಲ್ಲಿ ಗುಜಿರಿ ಮಾರಾಟಗಾರರು ವಾಸಿಸುತ್ತಿದ್ದರು. ಘಟನೆಯಲ್ಲಿ ಗಂಭೀರ ಗಾಯಗೊಂಡ ಗಾಯಾಳುಗಳನ್ನು ಸಫ್ದರ್‌ಜಂಗ್ ಆಸ್ಪತ್ರೆ ಮತ್ತು ಏಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಗಿದೆ. ಆದರೆ, ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ತಡೆಯಲು ಕೊಳೆಗೇರಿ ನಿವಾಸಿಗಳನ್ನು ಸ್ಥಳಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.