
New Delhi: ಮೊದಲ ಮಹಿಳಾ ಆರ್‌ಪಿಎಫ್ ಮಹಾನಿರ್ದೇಶಕಿಯಾಗಿ ಸೋನಾಲಿ ಮಿಶ್ರಾ ಅಧಿಕಾರ ಸ್ವೀಕಾರ
02/08/2025
ರೈಲ್ವೇ ಭದ್ರತಾ ಪಡೆ (ಆರ್‌ಪಿಎಫ್) ಮಹಾ ನಿರ್ದೇಶಕಿಯಾಗಿ ಹಿರಿಯ ಐಪಿಎಸ್ ಅಧಿಕಾರಿ ಸೋನಾಲಿ ಮಿಶ್ರಾ ಅವರು ಅಧಿಕಾರ ಸ್ವೀಕರಿಸಿದ್ದಾರೆ.
ಮನೋಜ್ ಯಾದವ್ ಅವರಿಂದ ತೆರವಾದ ಸ್ಥಾನಕ್ಕೆ 1993ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿ ಸೋನಾಲಿ ಮಿಶ್ರಾ ಅವರನ್ನು ಆರ್‌ಪಿಎಫ್ ಮಹಾ ನಿರ್ದೇಶಕರನ್ನಾಗಿ ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶಿಸಿತ್ತು. ಇದೀಗ ಸೋನಾಲಿ ಮಿಶ್ರಾ ಅಧಿಕಾರ ಸ್ವೀಕರಿಸಿದ್ದಾರೆ. ಸೋನಾಲಿ ಅವರು 2026ರ ಅಕ್ಟೋಬರ್ 31ರವರೆಗೆ ರೈಲ್ವೇ ಭದ್ರತಾ ಪಡೆಯ ಮಹಾನಿರ್ದೇಶಕಿಯಾಗಿ ಕೆಲಸ ಮಾಡಲಿದ್ದಾರೆ. ಸೋನಾಲಿ ಅವರು ಮದ್ಯಪ್ರದೇಶ ಪೊಲೀಸ್ ಇಲಾಖೆಯಲ್ಲಿ ಹೆಚ್ಚುವರಿ ಮಹಾನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಈ ಮೊದಲು ಸೋನಾಲಿ ಅವರು ಸಿಬಿಐ, ಬಿಎಸ್‌ಎಫ್‌ನಲ್ಲಿಯೂ ಸೇವೆ ಸಲ್ಲಿಸಿದ್ದಾರೆ. ಅಲ್ಲದೇ ಕೊಸೊವೊದಲ್ಲಿ ವಿಶ್ವಸಂಸ್ಥೆಯ ಶಾಂತಿ ಪಾಲನಾ ಕಾರ್ಯಾಚರಣೆಯಲ್ಲಿ ಸೇವೆ ಸಲ್ಲಿಸಿದ್ದು, ಅವರಿಗೆ ರಾಷ್ಟçಪತಿಗಳ ಪೊಲೀಸ್ ಪದಕ ಸೇರಿದಂತೆ ಪ್ರತಿಷ್ಟಿತ ಪ್ರಶಸ್ತಿಗಳು ಲಭಿಸಿದೆ.