
New Delhi: ಆನ್‌ಲೈನ್ ಬೆಟ್ಟಿಂಗ್ ಪ್ರಚಾರ; ಇ.ಡಿ ಮುಂದೆ ಹಾಜರಾದ ಕ್ರಿಕೆಟಿಗ ರೈನಾ
13/08/2025
ಆನ್‌ಲೈನ್ ಬೆಟ್ಟಿಂಗ್ ಪ್ರಕರಣಕ್ಕೆ ಸಂಬ0ಧಿಸಿದ0ತೆ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಇಡಿ ವಿಚಾರಣೆಗೆ ಹಾಜರಾಗಿದ್ದಾರೆ.
ಆನ್‌ಲೈನ್ ಬೆಟ್ಟಿಂಗ್ ಅಪ್ಲಿಕೇಶನ್‌ಗೆ ಸಂಬ0ಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಮಾಜಿ ಕ್ರಿಕೆಟಿಗ ಸುರೇಶ್ ರೈನಾಗೆ ನೋಟಿಸ್ ನೀಡಿ, ಆ.13ರಂದು ವಿಚಾರಣೆಗೆ ಹಾಜರಾಗುವಂತೆ ತಿಳಿಸಿತ್ತು. ಅದರಂತೆ ದೆಹಲಿಯಲ್ಲಿರುವ ಇಡಿ ಕಚೇರಿಗೆ ಆಗಮಿಸಿ, ವಿಚಾರಣೆಗೆ ಹಾಜರಾಗಿದ್ದಾರೆ. ಇಡಿ ವಿಚಾರಣೆ ವೇಳೆ ರೈನಾ ಅವರ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.