New Delhi: ಜಮ್ಮುಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ನಿಧನ

New Delhi: ಜಮ್ಮುಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ನಿಧನ


ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಆಗಸ್ಟ್ 5ರಂದು ನಿಧನರಾಗಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಹೊಸದಿಲ್ಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಧ್ಯಾಹ್ನ ಸುಮಾರು 1 ಗಂಟೆಗೆ ಕೊನೆಯುಸಿರೆಳೆದರು. 


ಸತ್ಯಪಾಲ್ ಮಲಿಕ್ ಅವರಿಗೆ ಮೂತ್ರಪಿಂಡದ ಸಮಸ್ಯೆ ಇತ್ತು. ಹೀಗಾಗಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಜಮ್ಮು ಮತ್ತು ಕಾಶ್ಮೀರವಲ್ಲದೆ, ಬಿಹಾರದ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದರು. ಕೃಷಿ ಚಳುವಳಿ ಮತ್ತು ಭ್ರಷ್ಟಾಚಾರದ ಬಗ್ಗೆ ಅವರು ತಮ್ಮ ಅಭಿಪ್ರಾಯಗಳನ್ನು ಮುಕ್ತವಾಗಿ ಹೇಳುತ್ತಿದ್ದರು. 

ಸಮಾಜವಾದಿ ನಾಯಕ ರಾಮ್‌ಮನೋಹರ್ ಲೋಹಿಯಾಅವರ ಸಿದ್ಧಾಂತದಿAದ ಪ್ರೇರಿತರಾಗಿ 1965-66ರಲ್ಲಿ ಮಲಿಕ್ ರಾಜಕೀಯಕ್ಕೆ ಪ್ರವೇಶಿಸಿದರು. ಉತ್ತರ ಪ್ರದೇಶದ ಬಾಗ್‌ಪತ್‌ನವರಾದ ಸತ್ಯಪಾಲ್ ಮಲಿಕ್ ಮೊದಲ ಬಾರಿಗೆ ಚೌಧರಿ ಚರಣ್ ಸಿಂಗ್ ಅವರ ಭಾರತೀಯ ಕ್ರಾಂತಿ ದಳದ ಟಿಕೆಟ್‌ನಿಂದ ಆಯ್ಕೆಯಾದರು. 1970 ರಲ್ಲಿ ಶಾಸಕರಾಗಿ ರಾಜಕೀಯ ವೃತ್ತಿಜೀವನವನ್ನು ಆರಂಭಿಸಿದರು. ರಾಜಕಾರಣಿಯಾಗಿ ಸುಮಾರು 50 ವರ್ಷ ಜೀವನ ನಡೆಸಿದರು. ಈ ಅವಧಿಯಲ್ಲಿ ಅವರು ಹಲವು ಪಕ್ಷಗಳನ್ನು ಬದಲಾಯಿಸಿದರು. 


Ads on article

Advertise in articles 1

advertising articles 2

Advertise under the article