
Puttur: 8 ಸಾವಿರ ಬೆಲೆ ಬಾಳುವ ತಾಮ್ರದ ಗಂಟೆ ಕಳವು ಪ್ರಕರಣ; ಆರೋಪಿಯ ಬಂಧನ
10/08/2025
ಸುಮಾರು 10 ಕೆಜಿ ತೂಕದ 8 ಸಾವಿರ ರೂಪಾಯಿ ಬೆಲೆ ಬಾಳುವ ತಾಮ್ರದ ಗಂಟೆಯನ್ನು ಕಳ್ಳತನ ಮಾಡಿದ್ದ ಆರೋಪಿಯನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬ0ಧಿತನನ್ನು ಕಬಕ ನಿವಾಸಿ ಸಂಶುದ್ದೀನ್ ಯಾನೆ ಸಂಶು (50) ಎಂದು ಗುರುತಿಸಲಾಗಿದೆ. ಸುಮಾರು 10 ಕೆಜಿ ತೂಕದ 8000 ರೂಪಾಯಿ ಬೆಲೆ ಬಾಳುವ ತಾಮ್ರದ ಗಂಟೆ ಕಳವು ಪ್ರಕರಣಕ್ಕೆ ಸಂಬ0ಧಿಸಿದ0ತೆ ಜುಲೈ 26ರಂದು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಆರೋಪಿ ಸಂಶುದ್ದೀನ್‌ನನ್ನು ದಸ್ತಗಿರಿ ಮಾಡಿದ್ದಾರೆ.