
Puttur: ತಲೆಮರೆಸಿಕೊಂಡಿದ್ದ ಕಳ್ಳನ ಬಂಧನ; ಉಪ್ಪಿನಂಗಡಿ ಪೊಲೀಸರ ಕಾರ್ಯಾಚರಣೆ
05/08/2025
ಹಲವು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಹಾಸನ ಮೂಲದ ಕುಖ್ಯಾತ ಕಳ್ಳನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಹಾಸನ ಮೂಲದ, ಮಂಗಳೂರಿನ ತಲಪಾಡಿ ಎಂಬಲ್ಲಿ ವಾಸವಿದ್ದ ಅಕ್ಬರ್ ಸೊಹೈಬ್(24) ಎಂದು ಗುರುತಿಸಲಾಗಿದೆ. ಬಂಧಿತನ ವಿರುದ್ದ ಉಪ್ಪಿನಂಗಡಿ, ಬಂಟ್ವಾಳ, ಉಳ್ಳಾಲ ಹಾಗೂ ಕೇರಳದಲ್ಲಿ ವಿವಿಧ ಕಳ್ಳತನ ಪ್ರಕರಣ ದಾಖಲಾಗಿದೆ. ಆರೋಪಿಯ ಬಗ್ಗೆ ಖಚಿತ ಮಾಹಿತಿ ಪಡೆದ ಉಪ್ಪಿನಂಗಡಿ ಠಾಣಾ ಪೊಲೀಸ್ ಉಪನಿರೀಕ್ಷರಾದ ಕೌಶಿಕ್ ಅವರ ನೇತೃತ್ವದ ತಂಡ ಹಾಸನದ ಬಿಟ್ಟಗೌಡನಹಳ್ಳಿ ಎಂಬಲ್ಲಿ ದಸ್ತಗಿರಿ ಮಾಡಿ ಕರೆ ತಂದಿದ್ದಾರೆ.