Puttur: ಕಳ್ಳತನ ಪ್ರಕರಣ; ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
17/08/2025
ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ.
ಉನ್ಮೇಶ ಬಂಧಿತ ಆರೋಪಿ. ಈತನ ವಿರುದ್ಧ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ ದಾಖಲಾಗಿದ್ದು, ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಸದ್ಯ ಆರೋಪಿ ಉನ್ಮೇಶನನ್ನು ಕೇರಳದಲ್ಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.