
Rajasthan: ಪಾಕಿಸ್ತಾನ ಪರ ಬೇಹುಗಾರಿಕೆ; ಡಿಆರ್‌ಡಿಓ ಅತಿಥಿ ಗೃಹದ ವ್ಯವಸ್ಥಾಪಕ ಬಂಧನ
13/08/2025
ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಪರವಾಗಿ ಬೇಹುಗಾರಿಕೆ ನಡೆಸುತ್ತಿದ್ದ ಮತ್ತು ಭಾರತದ ರಕ್ಷಣಾ ಚಟುವಟಿಕೆಗಳಿಗೆ ಸಂಬಂಧಿಸಿದ ಗೌಪ್ಯ ಮಾಹಿತಿಯನ್ನು ಸೋರಿಕೆ ಮಾಡಿದ ಆರೋಪದಲ್ಲಿ ಡಿಆರ್‌ಡಿಒ ಅತಿಥಿ ಗೃಹದ ವ್ಯವಸ್ಥಾಪಕನನ್ನುಸಿಐಡಿ ಪೊಲೀಸರ ತಂಡ ಬಂಧಿಸಿದೆ.
ಉತ್ತರಾಖಂಡದ ಅಲ್ಮೋರಾದ ಪಲ್ಯುನ್ ನಿವಾಸಿ ಮಹೇಂದ್ರ ಪ್ರಸಾದ್ (32) ಬಂಧಿತ ಆರೋಪಿ. ಈತನನ್ನು ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.
ಈತ ಚಂದನ್ ಫೀಲ್ಡ್ ಫೈರಿಂಗ್ ರೇಂಜ್‌ನಲ್ಲಿರುವ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ (ಡಿಆರ್‌ಡಿಒ) ಅತಿಥಿ ಗೃಹದ ವ್ಯವಸ್ಥಾಪಕನಾಗಿದ್ದನು. ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಜೊತೆ ನಿರಂತರ ಸಂಪರ್ಕದಲ್ಲಿದ್ದು, ಭಾರತದ ರಕ್ಷಣಾ ಚಟುವಟಿಕೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಸೋರಿಕೆ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.