
Shimoga: ಸಿಎಂ ಸಿದ್ಧರಾಮಯ್ಯ ಅವರ ಹುಟ್ಟುಹಬ್ಬ; ಮಾರಿಕಾಂಬ ದೇಗುಲದಲ್ಲಿ ವಿಶೇಷ ಪೂಜೆ
03/08/2025
ಸಿಎಂ ಸಿದ್ದರಾಮಯ್ಯ ಅವರ ಹುಟ್ಟುಹಬ್ಬದ ಪ್ರಯುಕ್ತ ಶಿವಮೊಗ್ಗದ ಕೋಟೆ ಶ್ರೀ ಮಾರಿಕಾಂಬ ದೇವಾಲಯದಲ್ಲಿ ಶಿವಮೊಗ್ಗದ ನಗರ ದೇವತೆ ಕೋಟೆ ಶ್ರೀ ಮಾರಿಕಾಂಬ ದೇವಾಲಯದಲ್ಲಿ 77 ಈಡುಗಾಯಿ ಒಡೆದು ವಿಶೇಷ ಪೂಜೆ ಸಲ್ಲಿಸಲಾಯಿತು.
ಶಿವಮೊಗ್ಗ ಯುವ ಕಾಂಗ್ರೆಸ್ ಹಾಗೂ ಶಿವಮೊಗ್ಗ ಜಿಲ್ಲಾ ಕರುನಾಡ ದೊರೆ ಸಿದ್ದರಾಮಯ್ಯ ಅಭಿಮಾನಿ ಬಳಗದ ವತಿಯಿಂದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸಿಎಂ ಸಿದ್ಧರಾಮಯ್ಯ ಅವರಿಗೆ ಆರೋಗ್ಯ ಆಯಸ್ಸು ಸಿಗಲಿ. ಉತ್ತಮ ಆಡಳಿತ, ಜನಪರ ಯೋಜನೆಗಳನ್ನು ಜಾರಿಗೆ ತರುವ ಶಕ್ತಿ ದೇಔರು ಕೊಡಲಿ ಎಂದು ಪ್ರಾರ್ಥಿಸಿ, ವಿಶೇಷ ಪೂಜೆ ಸಲ್ಲಿಸಲಾಯಿತು.