
Shirva: ಗಾಂಧಿ ಭಾರತ್ ಬೃಹತ್ ಸಮಾವೇಶ; ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಚಾಲನೆ
03/08/2025
ಕಾಪು ಬ್ಲಾಕ್ ಕಾಂಗ್ರೆಸ್ ದಕ್ಷಿಣ ವತಿಯಿಂದ ಶಿರ್ವ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಗಾಂಧಿ ಭಾರತ್ ಬೃಹತ್ ಸಮಾವೇಶ ಕಾರ್ಯಕ್ರಮವು ಶಿರ್ವದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಮಾಜಿ ಸಚಿವ ವಿನಯಕುಮಾರ್ ಸೊರಕೆ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಉಪಾಧ್ಯಕ್ಷ ಕಿಮ್ಮನೆ ರತ್ನಾಕರ್, ಮಾಜಿ ಶಾಸಕ ಜೆ ಆರ್ ಲೋಬೊ, ಮುಖಂಡರಾದ ಮುನೀರ್ ಜನ್ಸಾಲೆ, ಕಾಪು ದಿವಾಕರ್ ಶೆಟ್ಟಿ, ವೈ ಸುಕುಮಾರ್, ಎಂ ಎ ಗಫೂರ್ ಇತರ ಮುಖಂಡರು ಉಪಸ್ಥಿತರಿದ್ದರು.