
Shirva: ಎಂ.ಎಸ್.ಆರ್.ಎಸ್ ಕಾಲೇಜಿನಲ್ಲಿ ಮಾದಕ ವ್ಯಸನ ಜಾಗೃತಿ ಕಾರ್ಯಕ್ರಮ
13/08/2025
ಶಿರ್ವದ ಮೂಲ್ಕಿ ಸುಂದರ ರಾಮ್ ಶೆಟ್ಟಿ ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಕೋಶ ಹಾಗೂ ಮಾದಕ ವ್ಯಸನ ಜಾಗೃತಿ ಸಮಿತಿ ಆಶ್ರಯದಲ್ಲಿ ಮಾದಕ ವ್ಯಸನ ಜಾಗೃತಿ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಶಿರ್ವ ಆರಕ್ಷಕ ಠಾಣೆಯ ಸಬ್ ಇನ್ಸ್ಪೆಕ್ಟರ್ ಲೋಹಿತ್ ಕುಮಾರ್ ಮಾತನಾಡಿ, ಮಾದಕ ವಸ್ತುಗಳ ವಿವಿಧ ಬಗೆಗಳು, ಪ್ರಚಲಿತ ದಿನಗಳಲ್ಲಿ ಮಾದಕ ದ್ರವ್ಯ ಪ್ರಕರಣಗಳ ಕುರಿತು, ಮಾದಕ ದ್ರವ್ಯ ಮಾರಾಟ ಉಲ್ಲಂಘನೆಯ ಬಗ್ಗೆ ವಿವರಿಸಿ, ಅರೋಗ್ಯದ ಮೇಲೆ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ವಿಧ್ಯಾರ್ಥಿಗಳಿಗೆ ತಿಳಿ ಹೇಳಿದರು. ಕಾಲೇಜಿನ ಪ್ರಾಂಶುಪಾಲ ಡಾ. ಮಿಥುನ್ ಚಕ್ರವರ್ತಿ ಅಧ್ಯಕ್ಷತೆ ವಹಿಸಿದ್ದರು. ಶಿರ್ವ ಠಾಣಾ ಹೆಡ್ ಕಾನ್ಸ್ಟೇಬಲ್ ಮಂಜುನಾಥ್ ಅಡಿಗ, ಡಾ. ಸೋನಾ. ಎಚ್. ಸಿ ಮೊದಲಾದವರು ಇದ್ದರು.