
Udupi: ಆ. 23ರಿಂದ 26ರವರೆಗೆ ಅಥ್ಲೆಟಿಕ್; ಸಚಿವ ಪರಮೇಶ್ವರ್‌ಗೆ ಆಮಂತ್ರಣ
19/08/2025
ಉಡುಪಿ ಜಿಲ್ಲಾ ಆಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್ ಮತ್ತು ಉಡುಪಿ ಜಿಲ್ಲಾ ಕಿರಿಯರ ಅಥ್ಲೆಟಿಕ್ ಮೀಟ್ ಸಹಯೋಗದಲ್ಲಿ ಆಗಸ್ಟ್ 23ರಿಂದ ಆಗಸ್ಟ್ 26ರವರೆಗೆ ಉಡುಪಿಯಲ್ಲಿ ಆಯೋಜಿಸಿರುವ ಕರ್ನಾಟಕ ರಾಜ್ಯ ಕಿರಿಯರ ಮತ್ತು 23ರ ವಯೋಮಿತಿಯ ರಾಜ್ಯ ಮಟ್ಟದ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕರ್ನಾಟಕ ರಾಜ್ಯ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್ ಅಧ್ಯಕ್ಷರೂ ಆಗಿರುವ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರಿಗೆ ಆಮಂತ್ರಣ ನೀಡಲಾಯಿತು.
ಉಡುಪಿ ಜಿಲ್ಲಾ ಆಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್‌ನ ಪದಾಧಿಕಾರಿಗಳು ಸಚಿವ ಡಾ. ಪರಮೇಶ್ವರ್ ಅವರನ್ನು ಭೇಟಿಯಾಗಿ ಆಮಂತ್ರಣ ಪತ್ರಿಕೆ ನೀಡಿದರು. ಈ ವೇಳೆ ಕರ್ನಾಟಕ ರಾಜ್ಯ ಅಥ್ಲೆಟಿಕ್ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಸಿ.ಎ. ರಾಜವೇಲು, ಜಂಟಿ ಕಾರ್ಯದರ್ಶಿ ಉಮೇಶ್, ಕ್ರೀಡಾಕೂಟದ ಸಂಘಟನಾ ಸಮಿತಿ ಅಧ್ಯಕ್ಷ ರಘಪತಿ ಭಟ್, ಉಡುಪಿ ಜಿಲ್ಲಾ ಆಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್ ಅಧ್ಯಕ್ಷ ಹರಿಪ್ರಸಾದ್ ರೈ ಮೊದಲಾದವರು ಇದ್ದರು.